ಮೂಢ ಉವಾಚ - 1 

ಅತ್ತಮುಖ ಇತ್ತಮುಖ ಎತ್ತೆತ್ತಲೋ ಮುಖ|

ಏಕಮುಖ ಬಹುಮುಖ ಸುಮುಖ ಕುಮುಖ||

ಮುಖದೊಳಗೊಂದು ಮುಖ ಹಿಮ್ಮುಖ ಮುಮ್ಮುಖ|

ಮುಖಾಮುಖಿಯಲ್ಲಿ ನಿಜಮುಖವೆಲ್ಲೋ ಮೂಢ||

 

ಸಜ್ಜನನು ಬೇರಲ್ಲ ದುರ್ಜನನು ಬೇರಲ್ಲ|

ಬುದ್ಧನೂ ಬೇರಲ್ಲ ಹಿಟ್ಲರನೂ ಬೇರಿಲ್ಲ||

ಕೆಡುಕದು ಬೇರಲ್ಲ ಒಳ್ಳಿತದು ಬೇರಿಲ್ಲ|

ಎಲ್ಲ ನೀನೆ ಎಲ್ಲವೂ ನಿನ್ನೊಳಗೆ ಮೂಢ||

**********************

ಕವಿನಾಗರಾಜ್.