ಅಜ್ಞಾತವಾದುದನಭಾವವೆನೆ ನಾಸ್ತಿಕನು
ಅಜ್ಞೇಯವೆಂದದಕೆ ಕೈಮುಗಿಯೆ ಭಕ್ತ
ಜಿಜ್ಞಾಸ್ಯವೆಂದು ಪರಿಕಿಸತೊಡಗೆ ವಿಜ್ಞಾನಿ
ಸ್ವಜ್ಞಪ್ತಿಶೋಧಿ ಮುನಿ - ಮಂಕುತಿಮ್ಮ