ಧನಕನಕ ಅಧಿಕಾರ ಪದವಿ ಕೀರ್ತಿಗಳು
ಆತ್ಮಜ್ಞಾನದಲಿ ಬರದೆಂದು ಕೊರಗದಿರು |
ಆನಂದ ಪ್ರಾಪ್ತಿ ಸುಖ ದುಃಖ ನಿವೃತ್ತಿ
ಆತ್ಮಜ್ಞಾನದಲೆ ಮುಕ್ತಿಯೋ ಮೂಢ ||. .219.
ದೇವ ಸುಜನ ಗುರು ಹಿರಿಯರಲಿ ಶ್ರದ್ಧೆ
ತನು ಶುದ್ಧಿ ಮನ ಶುದ್ಧಿ ಜೊತೆಜೊತೆಗೆ| ನೇರ ನಡೆ ನುಡಿಯು ತ್ರಿಕರಣದಲಿರಲು ಪರಮಪದಕಿದಕಿಂತ ತಪವುಂಟೆ ಮೂಢ ||. .220. **************** -ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (5)