ಜಡವೆಂಬುದೇನು? ಸೃಷ್ಟಿಯಲಿ ಚೇತನ ಸುಪ್ತಿ
ಅಡಗಿ ನಿದ್ರಿಪುದಲ್ಲಿ ಚೈತನ್ಯದಗ್ನಿ
ಮಿಡಿಯೆ ಪರಸತ್ತ್ವ ವಿದ್ಯುದ್ದೀಪ್ತಿಯದನಾಗ
ನಡೆವುದದು ಜೀವಿವೊಲು - ಮಂಕುತಿಮ್ಮ