ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ
ಸ್ತಿಮಿತದಿಂ ನಿಂತಿರ್ಪುದದು ಧರೆಯ ಹಿತಕೆ
ಶಮದ ಸುಂದರದ ಸಾತ್ತ್ವಿಕದ ಗಾಂಭೀರ್ಯವದು
ನಮಗೊಂದು ವೇದನಿಧಿ - ಮಂಕುತಿಮ್ಮ