ಎಲುಬಿರದ ನಾಲಿಗೆಯ ಮೆದುವೆಂದೆಣಿಸದಿರು
ಭದ್ರ ಹೃದಯವನು ಛಿದ್ರವಾಗಿಸಬಹುದು|
ಮನ ಮನೆಗಳ ಮುರಿದು ಕ್ಲೇಶ ತರಬಹುದು
ಕೆನ್ನಾಲಿಗೆಯ ತಣಿಪುದೆಂತೋ ಮೂಢ||
ನೊಂದಮನಕೆ ಶಾಂತಿಯನು ನೀಡುವುದು
ಮನವ ನೋಯಿಸಿ ನರಳಿಪುವುದೆ ನಾಲಿಗೆ|
ಜೀವವುಳಿಸೀತು ಹಾಳುಗೆಡವೀತು
ನಾಲಿಗೆಯೆರಡಲಗಿನ ಕಠಾರಿ ಮೂಢ||
***************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (4)