ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ
ಕೃಮಿ ಬೀಜದಿಂ ಮತ್ಸ್ಯ  ಮೃಗ ಮನುಜರಂತೆ
ಕ್ರಮ ವಿವರವೇನಿರಲಿ ಸೃಷ್ಟಿಯ ವಿಧಾನದಲಿ
ಸಮಸದದು ಸತ್ತ್ವವನು - ಮಂಕುತಿಮ್ಮ