ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ
ಭುವನಪೋಷಣೆಯುಭಯ ಸಹಕಾರದಿಂದ
ವಿವಿಧ ಶಕ್ತಿರಸಂಗಳೇಕೀಭವಿಸೆ ಜೀವ
ಅವಿತರ್ಕ್ಯ ಸೂಕ್ಷ್ಮವದು - ಮಂಕುತಿಮ್ಮ