ಸುಖ ಬೇಕು ಮನುಜನಿಗೆ ದುಃಖ ಬೇಡ
ಸುಖಿಯು ಹೆಚ್ಚು ಸುಖ ಬಯಸುವನು |
ಬೇಡವೆನಿಸದ ದುಃಖಗಳೆರಗೆರಗಿ ಬರುತಿರಲು
ಸುಖವ ನಿನ್ನೊಳಗೆ ಅರಸು ಮೂಢ || .. 247
ಲೌಕಿಕ ಸುಖಕಾಗಿ ಹೊರಗೆ ಸುತ್ತಲು ಬೇಕು
ಅಂತರಂಗದ ಸುಖಕೆ ಒಳಗೆ ಸಾಗಲು ಬೇಕು |
ಸುಖ ದುಃಖಗಳೆರಡು ಅವಳಿ ಜವಳಿಗಳು
ಒಂದು ಬಿಟ್ಟಿನ್ನೊಂದಿಲ್ಲ ಮೂಢ || .. 248
********************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (5)