ವಿಷಯರಾಗವನು ಮೂಡಿಪುದೆ ಮನಸು
ಪಶುತರದಿ ಬಂಧಗೊಳಿಪುವುದು ಮನಸೆ |
ವಿರಾಗದಲಿ ಬಂಧ ಬಿಡಿಸುವುದು ಮನಸು
ಮನಸಿನಿಂದಲೆ ಕನಸು ನನಸು ಮೂಢ || .. 253
ಶ್ರಮವಿರದ ಸುಖವೆಲ್ಲರಿಗೆ ಬೇಕು ನಿತ್ಯ
ಸುಖವು ಶ್ರಮದಲಿಹುದೆಂಬುದೆ ಪರಮಸತ್ಯ |
ಸುಖಿಸುವರ ಕಂಡು ಕರುಬುವರು ಪರರು
ಶ್ರಮಿಸುವರ ಮಚ್ಚರಿಪರಿಹರೆ ಮೂಢ || .. 254
************************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (3)