ಶಿವಸೌಖ್ಯಸೌಂದರ್ಯಗಳ ಪೂರ್ಣರವಿ ಬೊಮ್ಮ
ಭುವನಜೀವನಜಲಧಿಯೂರ್ಮಿಕೋಟಿಯಲಿ
ಛವಿಕೋಟಿಯೆರಚಲ್ ಪ್ರತಿಚ್ಛಾಯೆ ವಿಲಸಿಪುದು
ಸವಿ ನಮ್ಮದದರ ಕಣ - ಮಂಕುತಿಮ್ಮ