ಹೆತ್ತು ಹೊತ್ತು ಸಲಹಿದ ಮಮತೆಯ ಜಲಧಿ
ತಾಯ ಋಣ ತೀರಿಸಲು ಆಗುವುದೆ ಜಗದಿ |
ನೋವನುಂಡು ನಲಿವ ನೀಡುವಳು ಮುದದಿ
ಆಕೆಯನು ನೋಯಿಪನು ಕಡುಪಾಪಿ ಮೂಢ ||..255
ಸಾಲ ಪಡೆದೆವು ನಾವು ಋಣಿಗಳಾದೆವು ನಾವು
ಶರೀರವಿತ್ತ ದೇವಗೆ ಹೆತ್ತವರ್ಗೆ ಹೊತ್ತವರ್ಗೆ |
ದಾರಿ ತೋರುವ ಗುರು ಹಿರಿಯರೆಲ್ಲರಿಗೆ
ಸಾಲವನು ತೀರಿಸದೆ ಮುಕ್ತಿಯುಂಟೆ ಮೂಢ ||..256
*********************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (5)