ಮೂಢ ಉವಾಚ - 13
ಅಹುದಿಹುದು ಅಡೆತಡೆಯು ಬಾಳಹಾದಿಯಲಿ|
ಸಾಗಬೇಕರಿತು ಪತಿ ಪತ್ನಿ ಜೊತೆಜೊತೆಯಲಿ||
ಸಮಪಾಲು ಪಡೆದಿರಲು ನೋವು ನಲಿವಿನಲಿ|
ಬಾಳು ಬಂಗಾರ ಬದುಕು ಸಿಂಗಾರ ಮೂಢ||
ಉಣ್ಣಲುಡಲಿರಬೇಕು ನೆರಳಿರಬೇಕು|
ಮನವರಿತು ಅನುಸರಿಪ ಮಡದಿ ಬೇಕು||
ಬೆಳಕಾಗಿ ಬಾಳುವ ಮಕ್ಕಳಿರಬೇಕು|
ಇರುವುದೇ ಸಾಕೆಂಬ ಮನ ಬೇಕು ಮೂಢ||
***************************
-ಕವಿನಾಗರಾಜ್.
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!