ಮರಣಕಿಂತಲು ಘೋರ ಮುಪ್ಪೆಂಬ ಶಾಪ
ದೇಹ ದುರ್ಬಲವು ರೋಗ ರುಜಿನಗಳ ಕೂಪ |
ಅನ್ಯರನು ನೆಚ್ಚುವ ದೈನ್ಯತೆಯೆ ತಾಪ
ನರರ ಮಸ್ತಕದ ಲಿಖಿತವಿದು ಮೂಢ || ..269
ಎದೆಯಲ್ಲಿ ದುಃಖ ಮಡುಗಟ್ಟಿದಾಕ್ರೋಷ
ಬರಡು ಮನದಲಿ ತೋರಿಕೆಯ ಸಂತೋಷ |
ಹೀನ ದೈನ್ಯತೆಯ ಆಶ್ರಯದ ಪಾಶ
ಮೂದಲಿಕೆ ತಪ್ಪೀತೆ ಮುದಿತನದಿ ಮೂಢ || ..270
****************************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (6)