ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ
ಕಂಪಿಸುವ ಕೇಂದ್ರ ನೀಂ ಬ್ರಹ್ಮ ಕಂದುಕದಿ
ಶಂಪಾತರಂಗವದರೊಳು ತುಂಬಿ ಪರಿಯುತಿದೆ
ದಂಭೋಳಿ ನೀನಾಗು - ಮಂಕುತಿಮ್ಮ