ಹೆಸರು ಹೆಸರೆಂದು ಕೊಸರಾಡಿ ಫಲವೇನು
ನೆನೆಸುವರು ಚಿರರಿಹರೆ ಚಿರವೆ ಹೆಸರು? |
ಅರಿತವರೆ ಬಿಡದಿಹರು ಹೆಸರ ಹಂಬಲವ
ಹುಲುನರರ ಕಥೆಯೇನು ಹೇಳು ಮೂಢ || ..273
ಏನಿಲ್ಲ ಏನಿಹುದು ಪೂರ್ಣ ಜಗವಿಹುದು
ಶಕ್ತನಿರೆ ಪಡೆಯುವೆ ದೇವನ ಕರುಣೆಯಿದು |
ಪಡೆದಿರುವೆ ನೀನು ಕೊಡದಿರಲು ದ್ರೋಹ
ಕೊಟ್ಟಷ್ಟು ಪಡೆಯುವೆ ನಿಜವು ಮೂಢ || ..274
*********************
-ಕ.ವೆಂ.ನಾಗರಾಜ್.
*********************
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಜಯ ಕನ್ನಡ!
ಪ್ರತಿಕ್ರಿಯೆ (2)