ಹೊರಗಣ್ಣು ತೆರೆದಿದ್ದು ಒಳಗಣ್ಣು ಮುಚ್ಚಿರಲು

ಹೊರಗಿವಿ ಚುರುಕಿದ್ದು ಒಳಗಿವಿಯು ಇಲ್ಲದಿರೆ |
ಸುತ್ತೆಲ್ಲ ಹುಡುಕಾಡಿ ತನ್ನೊಳಗೆ ಇಣುಕದಿರೆ
ತಿರುಳಿರದ ಹಣ್ಣಿನ ಸಿಪ್ಪೆ ನೀ ಮೂಢ || ..275


ಎಲ್ಲರನು ಜಯಿಸಿದವ ವೀರನೆಂಬುದು ಸುಳ್ಳು
ತನ್ನ ತಾ ಜಯಿಸದಿರೆ ಅವನೊಂದು ಜೊಳ್ಳು |
ಎಲ್ಲವನು ಪಡೆದವನು ಹಿರಿತನವ ಪಡೆದಾನೆ
ತನದಲ್ಲವೆನುವವನೆ ಹಿರಿಯ ಮೂಢ || ..276
******************
-ಕ.ವೆಂ.ನಾಗರಾಜ್.