ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು
ಹಳೆ ಹಿಮಾಚಲ ಗಂಗೆ ಹಳೆ ವಂಶಚರಿತೆ
ಹಳೆಯವಿವು ನೀನಿದರೊಳಾವುದನು ಕಳೆದೀಯೊ?
ಹಳದು ಹೊಸತರೊಳಿರದೆ? - ಮಂಕುತಿಮ್ಮ