ಅರಿವು ಧರ್ಮದ ಶಿರವು ಕರ್ಮ ಕೈಕಾಲುಗಳು
ತಿರುಳಿರದ ಫಲಕೆ ಸಮ ಅರಿವಿರದ ಕರ್ಮ |
ಕರ್ಮವಿರದಾ ಧರ್ಮ ೊಣಶುಷ್ಕ ಸಿದ್ಧಾಂತ
ನಿಜಧರ್ಮದ ಮರ್ಮ ಸತ್ಕರ್ಮ ಮೂಢ || ..283
ಅರಿವಿರದ ನರನಿರುವನೆ ದುರಿತದಿಂ ದೂರ
ಎಡವಿ ಜಾರುವನು ಕವಿಯೆ ಗೂಢಾಂಧಕಾರ |
ಬೆಳಗೀತು ಬಾಳು ಪಸರಿಸಲರಿವ ಬೆಳಕು
ವಿಕಸಿಸುವ ಹಾದಿ ತೋರೀತು ಮೂಢ || ..284
***********************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (2)