ಧಾತ್ರಿಯನು ಮದುವೆಮಂಟಪದೊಲು ಸಿಂಗರಿಸಿ
ಕ್ಷಾತ್ರದಗ್ನಿಗಳ ನರಹೃದಯಗಳೊಳಿರಿಸಿ
ಕೃತಿಮದುವನೆಡೆಬಿಡದೆ ನಡೆಸಿ ನಗುವ ವಿಲಾಸಿ
ಚಿತ್ರಕಾರಿಯೊ ಮಾಯೆ - ಮಂಕುತಿಮ್ಮ