ಒಂದಲ್ಲ ಎರಡಲ್ಲ ಮೂರು ನಾಲ್ಕಲ್ಲ
ಐದಲ್ಲ ಆರಲ್ಲ ಏಳಲ್ಲವೇ ಅಲ್ಲ |
ಎಂಟೊಂಬತ್ತಿಲ್ಲ ಹತ್ತು ಕಂಡೇ ಇಲ್ಲ
ಸರ್ವವ್ಯಾಪಕ ಶಕ್ತನೊಬ್ಬನೇ ಮೂಢ || ..295
ಚಲಿಸದೇ ಚಲಿಸುವನು ಅವನೊಬ್ಬನೇ
ನೋಡದೇ ನೋಡುವನು ಅವನೊಬ್ಬನೇ |
ಒಳಹೊರಗು ಎಲ್ಲೆಲ್ಲು ಅವನೊಬ್ಬನೇ
ನಿರಾಕಾರ ನಿರ್ವಿಕಾರ ಒಬ್ಬನೇ ಮೂಢ || ..296
*********************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (3)