ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ
ಜೀವವಾಸನೆಗಳಲಿ ಪೂರ್ವಕೃತವೆನಿಸಿ
ಧೀವರ್ತನೆಯಲಿ ಪೌರುಷವೆನಿಸಿ ಪರಸತ್ತ್ವ
ತ್ರೈವಿಧದೊಳಿರುತಿಹುದು - ಮಂಕುತಿಮ್ಮ