ಪ್ರಾರಬ್ಧಕರ್ಮಮುಂ ದೈವಿಕದ ಲೀಲೆಯುಂ
ತೋರುವುವದೃಷ್ಟವಿಧಿಯೆಂಬ ಪೆಸರುಗಳಿಂ
ಆರುಮಳೆವವರಿಲ್ಲವವುಗಳಾವೇಗಗಳ
ಪೌರುಷವು ನವಸತ್ತ್ವ - ಮಂಕುತಿಮ್ಮ