ಪೊಸರಸಂ ಬೇರಿಗನುದಿನಮೊದವಿ ಧರೆಯಿಂದ
ಸಸಿಗೆ ಹೊಸತಳಿರ ತಲೆಯಲಿ ಮುಡಿಸುವಂತೆ
ಹೊಸ ಸೃಷ್ಟಿಸತ್ತ್ವಮೆತ್ತಣಿನೊ ಬರುತನುದಿನಂ
ಪೊಸತಾಗಿಪುದು ಜಗವ - ಮಂಕುತಿಮ್ಮ