ನಯನ ನೋಡುವುದು ತನಗಾಗಿ ಅಲ್ಲ
ಕಿವಿಯು ಕೇಳುವುದು ತನಗಲ್ಲವೇ ಅಲ್ಲ |
ದೇಹವಿದು ದಣಿಯುವುದು ದೇಹಕೆಂದಲ್ಲ
ಯಾರಿಗಾಗೆಂದು ಗೊತ್ತಿಹುದೆ ಮೂಢ || ..311
ತನ್ನಿಷ್ಟ ಬಂದಂತೆ ನಯನ ನೋಡುವುದೆ?
ತಮ್ಮಿಚ್ಛೆಯಂತೆ ಕೈಕಾಲು ಆಡುವುವೆ? |
ತನುವಿನೊಳಗಿಹ ಅವನಿಚ್ಛೆಯೇ ಪರಮ
ಅವನಿರುವವರೆಗೆ ಆಟವೋ ಮೂಢ || ..312
*****************
-ಕ.ವೆಂ.ನಾಗರಾಜ್.
ಪ್ರತಿಕ್ರಿಯೆ (8)