ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆಲೆ
ನರಜಾತಿ ಸಾನುಭೂತಿಯ ಕಲಿಯಲೆಂದು
ಪರರೆಂಬರಿಲ್ಲ ಆತ್ಮಾಂಶರೆಲ್ಲರೆನುತ್ತೆ
ಬೆರೆ ನೀನು ವಿಶ್ವದಲಿ - ಮಂಕುತಿಮ್ಮ