ಆವ ಬೇಳೆಯದಾವ ನೀರಿನಲಿ ಬೇಯುವುದೊ
ಆವ ಜೀವದ ಪಾಕವಾವ ತಾಪದಿನೋ
ಆ ವಿವರವನು ಕಾಣದಾಕ್ಷೇಪಣೆಯದೇನು?
ದೈವಗುಟ್ಟದು ತಿಳಿಯೆ - ಮಂಕುತಿಮ್ಮ