ಹುಳು ಹುಟ್ಟಿ ಸಾಯುತಿರೆ, ನೆಲ ಸವೆದು ಕರಗುತಿರೆ
ಕಡಲೊಳೆತ್ತಲೊ ಹೊಸ  ದ್ವೀಪವೇಳುವುದು
ಕಳೆಯುತೊಂದಿರಲಿಲ್ಲಿ, ಬೆಳೆವುದಿನ್ನೊಂದೆಲ್ಲೊ
ಅಳಿವಿಲ್ಲ ವಿಶ್ವಕ್ಕೆ - ಮಂಕುತಿಮ್ಮ