ಕ್ಷಿತಿಚಕ್ರ ರವಿಚಕ್ರ ಋತುಚಕ್ರಗಳಿಗಿಹುದು
ಮಿತವೃತ್ತಿ ; ನರನಿಗಂತೆಯೆ ಕರ್ಮನಿಯತಿ
ಕ್ಷಿತಿಕಂಪ ರಾಹುಕೇತುಭ್ರಮೆ ನರಪ್ರಗತಿ
ಅತಿಚರಿತೆ ಪ್ರಕೃತಿಯಲಿ - ಮಂಕುತಿಮ್ಮ