ಅನುಬಂಧ ಜೀವಜೀವಕೆ ಪುರಾಕೃತದಿಂದ
ಮನದ ರಾಗದ್ವೇಷವಾಸನೆಗಳದರಿಂ
ತನುಕಾಂತಿ ಮೋಹ ವಿಕೃತಿಗಳುಮಾ ತೊಡಕಿನವು
ಕೊನೆಯಿರದ ಬಲೆಯೊ ಅದು - ಮಂಕುತಿಮ್ಮ