ಮೃತ್ಯು ತಾಂ ಬಂದು ಮೋಹಿನಿಯ ರೂಪದಿ ನಿನ್ನ
ಚಿತ್ತವನು ಸೆರೆವಿಡಿದು ನೆತ್ತರನು ಬಸಿದು
ನಿತ್ಯನಿನ್ನಸುವ ಲವ ಲವ ಪೀರುತಲಿ ದೀರ್ಘ
ಹತ್ಯೆಯಲಿ ಹರುಷಿಪಳೊ - ಮಂಕುತಿಮ್ಮ