ಕ್ಷಣವೊಂದರೊಳೆ ಪೂರ್ತಿ ಕೊಲ್ಲುವುದು ಯಮಶೂಲ
ಕ್ಷಣವನುಕ್ಷಣ ಕೊಲ್ಲುವುವು ಮೋಹಮಮತೆ
ಕುಣಿಕೆಯನು ನಿನ್ನ ಕೊರಳಿಗೆ ಹೂಡಿ ಚಿರಕಾಲ
ವಣುವಣುವೆ ಬಿಗಿಯುವುವೊ - ಮಂಕುತಿಮ್ಮ