ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ
ತಡಕಿ ನಾವಾಯ್ದಾಯ್ದು ನುಡಿಜೋಡಿಪಂತೆ
ಬಿಡಿಜೀವ ಸಂಗಾತಿಜೀವಗಳನರಸಿ ತಾಂ
ಪಡೆದಂದು ಪೂರ್ಣವದು - ಮಂಕುತಿಮ್ಮ