ಪರಿಪರಿಯ ರೂಪಕಾಂತಿಗಳ ಕಣ್ಣಾಗಿಸುವ
ಪರಿಪರಿಯ ಫಲಮಧುರಗಳ  ರಸನೆಗುಣಿಪ
ಪರಿಪರಿಯ ಕಂಠರವಗಳ ಕಿವಿಗೆ ಸೋಕಿಸುವ
ಗುರು ಸೃಷ್ಟಿ ರಸಿಕತೆಗೆ - ಮಂಕುತಿಮ್ಮ