ಮೂಢ ಉವಾಚ -3 

ಗತಿಯು ತಿರುಗುವುದು ಮತಿಯು ಅಳಿಯುವುದು|

ಬಂಧುತ್ವ ಮರೆಸುವುದು ಸ್ನೇಹಿತರು ಕಾಣಿಸರು||

ನಾನತ್ವ ಮೆರೆಯುವುದು ಪೊರೆಯು ಮುಸುಕುವುದು|

ಹಣವು ಗುಣವ ಹಿಂದಿಕ್ಕುವುದು ಕಾಣೋ ಮೂಢ||

 

ಸ್ನೇಹ ಪ್ರೀತಿಯಲು ಲಾಭವನೆ ಅರಸುವರು|

ಕಿಂಚಿತ್ತು ಪಡೆಯಲು ಶಾಶ್ವತವ ಕಳೆಯುವರು||

ವಿಶ್ವಾಸದಮೃತಕೆ ವಿಷವ ಬೆರೆಸುವರಿಹರು|

ಇಂಥವರ ಸಂಗದಿಂ ದೂರವಿರು ಮೂಢ||

*****************

-ಕವಿನಾಗರಾಜ್.