ಮೂಢ ಉವಾಚ -31

ಭುಗಿಲೆದ್ದ ಜ್ವಾಲಾಗ್ನಿ ಮನೆಯನ್ನೆ ಸುಟ್ಟೀತು
ಹದವರಿತ ಬೆಂಕಿಯದು ಅಟ್ಟುಣಬಡಿಸೀತು
ಕ್ರೋಧಾಗ್ನಿ ತರದಿರದೆ ಬಾಳಿನಲಿ ವಿರಸ?
ಹದವರಿತ ಕೋಪವದು ಹಿತಕಾರಿ ಮೂಢ

ದುಷ್ಟ ಶಿಕ್ಷಣಕಾಗಿ ಶಿಷ್ಟ ರಕ್ಷಣೆಗಾಗಿ
ಸಮಾಜಹಿತಕಾಗಿ ಧರ್ಮ ರಕ್ಷಣೆಗಾಗಿ
ರಾಷ್ಟ್ರ ಭದ್ರತೆಗಾಗಿ ಆತ್ಮಸಮ್ಮಾನಕಾಗಿ
ಕೋಪವದುಕ್ಕುಕ್ಕಿ ಬರಲಿ ಮೂಢ

***************

-ಕವಿನಾಗರಾಜ್.