ಮೂಢ ಉವಾಚ -32

ಬರುವುದೆಲ್ಲದಕು ಹಿಡಿಯುವುದು ಗ್ರಹಣ
ಕೂಡಿಡುವ ಬಚ್ಚಿಡುವ ನಿಪುಣ ತಾ ಕೃಪಣ
ಕೈಯೆತ್ತಿ ಕೊಡಲಾರ ಬಂದದ್ದು ಬಿಡಲಾರ
ಲೋಭಿಯಾ ಲೋಭಕೆ ಮದ್ದುಂಟೆ ಮೂಢ

ದೃಷ್ಟಿಭೋಗಕ್ಕುಂಟು ವಿನಿಯೋಗಕಿಲ್ಲ
ಅಪಹಾಸ್ಯ ನಿಂದೆಗಳಿಗಂಜುವುದೆ ಇಲ್ಲ
ಪ್ರಾಣವನೆ ಬಿಟ್ಟಾನು ಕೈಯೆತ್ತಿ ಕೊಡನು
ಲೋಭಿಯಾ ಲೋಭಕೆ ಮದ್ದುಂಟೆ ಮೂಢ

*****************

-ಕವಿನಾಗರಾಜ್