ಮೂಢ ಉವಾಚ -50
ಪಂಚಭೂತಗಳಿಂದಾದುದೀ ಮಲಿನ ದೇಹ|
ಹೊಲಸು ತುಂಬಿರುವ ಕೊಳಕು ಚರ್ಮದ ಚೀಲ||
ಬಣ್ಣಬಣ್ಣದ ಬಟ್ಟೆಯಲಿ ಮುಚ್ಚುವರು ಕೊಳಕ|
ಇಂತಪ್ಪ ದೇಹವನು ನಾನೆನಲೆ ಮೂಢ||
ತನುವು ಸುಂದರವೆಂದು ಉಬ್ಬದಿರು ಮನುಜ|
ಹೊಳೆವ ಚರ್ಮದೊಳಗಿಹುದು ಹೊಲಸು||
ತನುವಿನೊಳಿಲ್ಲ ಬಣ್ಣದೊಳಿಲ್ಲ ಚೆಲುವು ಹೊರಗಿಲ್ಲ|
ಒಳಗಿನ ಗುಣದಲ್ಲಿ ಚೆಲುವಿಹುದು ಮೂಢ||
********************
-ಕವಿನಾಗರಾಜ್.
ಪ್ರತಿಕ್ರಿಯೆ (6)