ಮೂಢ ಉವಾಚ -51
ದೇಹವೆಂಬುದು ಅನಂತ ಆಪತ್ತುಗಳ ತಾಣ|
ಹೇಳದೆ ಕೇಳದೆ ಸಾವು ಬರುವುದು ಜಾಣ||
ದೇಹ ಚೈತನ್ಯ ಮೂಲಕೆ ಸಾವಿರದು ಕಾಣಾ|
ಸಾಧು ಸಂತರ ಮಾತು ನೆನಪಿರಲಿ ಮೂಢ||
ರಕ್ತ ಮಾಂಸ ಮೂಳೆಗಳ ತಡಿಕೆಯೀ ತನುವು|
ಚೈತನ್ಯ ಒಳಗಿರೆ ತನುವರ್ಥ ಪಡೆಯುವುದು||
ದೇಹ ದೋಣಿಯಾಗಿಸಿ ಸಂಸಾರಸಾಗರವ|
ದಾಂಟಿಸುವ ಅಂಬಿಗನೆ ಜೀವಾತ್ಮ ಮೂಢ||
**********************
-ಕವಿನಾಗರಾಜ್.
ಪ್ರತಿಕ್ರಿಯೆ (3)