ಮೂಢ ಉವಾಚ - 6
ಆತುರದ ಮಾತು ಮಾನ ಕಳೆಯುವುದು|
ಕೋಪದ ನಡೆನುಡಿ ಸಂಬಂಧ ಕೆಡಿಸುವುದು||
ತಪ್ಪರಿತು ಒಪ್ಪಿದೊಡೆ ಬಿರುಕು ಮುಚ್ಚುವುದು|
ಬಿರುಕು ಕಂದರವಾದೀತು ಜೋಕೆ ಮೂಢ||
ವೈರಿಯ ಅಬ್ಬರಕೆ ಬರೆಯೆಳೆಯಬಹುದು|
ಕಪಟಿಯಾಟವನು ಮೊಟಕಿಬಿಡಬಹುದು||
ಮನೆಮುರುಕರನು ತರುಬಿಬಿಡಬಹುದು|
ಪ್ರೀತಿಯ ಆಯುಧಕೆ ಎಣೆಯುಂಟೆ ಮೂಢ||
****************
-ಕವಿನಾಗರಾಜ್.
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!