(ಬಾಗೇಶ್ರೀ ರಾಗ ದಾದರಾ ತಾಳ)

ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ
ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ||ಧ್ರುವ||

ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ
ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ ||೧||

ಸ್ವಾಮಿ ನಿಮ್ಮ ಖೂನ ನಮ್ಮ ನಿಜಸ್ಥಾನ
ಸ್ವಾಮಿ ನಿಮ್ಮ ಜ್ಞಾನ ನಮ್ಮ ನಿಜ ಧ್ಯಾನ ||೨||

ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ
ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ ||೩||

ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ
ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ ||೪||

ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ
ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ ||೫||