(ಶಂಕರಾಭರಣರಾಗ ಅದಿತಾಳ)
ಭಕ್ತಿ ಬೇಕು ವಿರಕ್ತಿ ಬೇಕು ಸರ್ವ-
ಶಕ್ತಿ ಬೇಕು ಮುಕ್ತಿಯ ಬಯಸುವಗೆ ||ಪ||
ಸತಿ ಅನುಕೂಲ ಬೇಕು ಸುತನಲಿ ಗುಣಬೇಕು
ಮತಿವಂತನಾಗಬೇಕು ಮತ ಒಂದಾಗಿರಬೇಕು ||೧||
ಜಪದ ಜಾಣುವೆ ಬೇಕು ತಪದ ನೇಮವೆ ಬೇಕು
ಉಪವಾಸ ವ್ರತ ಬೇಕು ಉಪಶಾಂತವಾಗಿರಬೇಕು ||೨||
ಸುಸಂಗ ಹಿಡಿಯಲಿಬೇಕು ದುಸ್ಸಂಗ ಬಿಡಲಿಬೇಕು
ರಂಗವಿಠಲನ್ನ ಬಿಡದೆ ನೆರೆ ನಂಬಿರಬೇಕು ||೩||
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!