ತೊರೆದು ಜೀವಿಸಬಹುದೆ

ಹರಿ ನಿನ್ನ ಚರಣಗಳ‌

ಬರಿದೇ ಮಾತೇಕಿನ್ನೂ

ಅರಿತು ಪೇಳುವೆನಯ್ಯ...  ||ಪ||

 

ತಾಯಿ ತಂದೆಯ ಬಿಟ್ಟು

ತಪವ ಮಾಡಲುಬಹುದು

ದಾಯಾದಿ ಬಂಧುಗಳ ಬಿಡಲುಬಹುದು

ರಾಯ ತಾ ಮುನಿದರೆ

ರಾಜ್ಯವನೆ ಬಿಡಬಹುದು

ಕಾಯಜಾ ಪಿತನಿನ್ನ ಅಡಿಯ ಬಿಡಲಾಗದು... ||೧||

 

ಒಡಲು ಹಸಿದರೆ ಮತ್ತೆ

ಅನ್ನವನೆ ಬಿಡಬಹುದು

ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು

ಮಡದಿ ಮಕ್ಕಳ ಕಡೆಗೆ

ತೊಲಗಿಸಿಯೆ ಬಿಡಬಹುದು

ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು...||೨||

 

ಪ್ರಾಣವನು ಪರರು

ಬೇಡಿದರೆತ್ತಿ ಕೊಡಬಹುದು

ಮಾನಾಭಿಮಾನವ ತಗ್ಗಿಸಲುಬಹುದು

ಪ್ರಾಣದಾಯಕಾನಾದ ಆದಿಕೇಶವರಾಯ‌

ಜಾಣ ಶ್ರೀ ಕೃಷ್ಣ ನಿನ್ನಡಿಯ‌ ಬಿಡಲಾಗದು....||೩||

 

(   ಕೃಪೆ :- ಗುರು. ಹೆಚ್. ಎಮ್ , ಮೈಸೂರು   )