ಇರಲಿ ನಿನ್ನಲ್ಲಿ ಭಕ್ತಿ ಎನಗೆ ಇರದಿರಲಿ
ಹರಿದಾಸನೆಂದೆನ್ನ ಕರೆವರು ಸಜ್ಜನರು
ಹರಿದಾಸರನು ಯಮನೆಳೆವನೆಂಬಪಕೀರ್ತಿಯ
ಪರಿಹರಿಸಿಕೊಳ್ಳೊ ಶ್ರೀ ಪುರಂದರವಿಠಲ