೧: ಮುಳ್ಳು ಕೊನೆಯ ಮೇಲೆ ಮೂರು ಕೆರೆಯ ಕಟ್ಟಿ ಎರಡು ಬರಿದು ಒಂದು ತುಂಬಲೇ ಇಲ್ಲ
೨: ತುಂಬಲಿಲ್ಲದ ಕೆರೆಗೆ ಬಂದರು ಮೂವರೊಡ್ಡರು ಇಬ್ಬರು ಕುಂಟರು ಒಬ್ಬಗೆ ಕಾಲೇ ಇಲ್ಲ
೩: ಕಾಲಿಲ್ಲದ ಒಡ್ಡರಿಗೆ ಕೊಟ್ಟರು ಮೂರು ಎಮ್ಮೆಗಳ ಎರಡು ಬರಡು ಒಂದಕ್ಕೆ ಕರುವೇ ಇಲ್ಲ
೪: ಕರುವಿಲ್ಲದ ಎಮ್ಮೆಗೆ ಕೊಟ್ಟರು ಮೂರು ಹೊನ್ನುಗಳ ಎರಡು ಸವಕಲು ಒಂದು ಸಲ್ಲಲೇ ಇಲ್ಲ
೫: ಸಲ್ಲದ ಹೊನ್ನುಗಳಿಗೆ ಬಂದರು ಮೂರು ನೋಟಗರು ಇಬ್ಬರು ಕುರುಡರು ಒಬ್ಬಗೆ ಕಣ್ಣೇ ಇಲ್ಲ
೬: ಕಣ್ಣಿಲ್ಲದ ನೋಟಗರಿಗೆ ಕೊಟ್ಟರು ಮೂರು ಊರುಗಳ ಎರಡು ಹಾಳು ಒಂದಕ್ಕೆ ಒಕ್ಕಲೇ ಇಲ್ಲ
೭: ಒಕ್ಕಲಿಲ್ಲದ ಊರಿಗೆ ಬಂದರು ಮೂವರು ಕುಂಬಾರರು ಇಬ್ಬರು ಚೊಂಚರು ಒಬ್ಬಗೆ ಕೈಯೇ ಇಲ್ಲ
೮: ಕೈಯಿಲ್ಲದ ಕುಂಬರರು ಮಾಡ್ಯಾರು ಮೂರು ಮಡಕೆಗಳ ಎರಡು ಒಡಕು ಒಂದಕ್ಕೆ ಬುಡವೇ ಇಲ್ಲ
೯: ಬುಡವಿಲ್ಲದ ಗಡಿಗೆಗೆ ಹಾಕಿದರು ಅಕ್ಕಿಗಳ ಎರಡು ಹಂಜಕ್ಕಿ ಒಂದು ಬೇಯಲೇ ಇಲ್ಲ
೧೦: ಬೇಯಲಿಲ್ಲದ ಅಕ್ಕಿಗೆ ಬಂದರು ಮೂವರು ನೆಂಟರು ಇಬ್ಬರು ಉಣ್ಣರು ಒಬ್ಬಗೆ ಹಸಿವೇ ಇಲ್ಲ
೧೧: ಹಸಿವಿಲ್ಲದ ನೆಂಟರಿಗೆ ಕೊಟ್ಟರು ಮೂರು ಟೊಣೆಪೆಗಳ ಎರಡು ಸೋಕವು ಒಂದು ತಾಕಲೇ ಇಲ್ಲ
೧೨: ಇನ್ನು ಈ ಅರ್ಥಗಳೆಲ್ಲ ಪುರಂದರ ವಿಟ್ಠಲ ಬಲ್ಲ ಅನ್ಯರು ಯಾರು ತಿಳಿದವರಿಲ್ಲ
(ಅಥವಾ) ತಾಕಲಿಲ್ಲದ ಟೊಣೆಪೆಗಳ ತಾಕಿಸಿ ಸದ್ಗತಿಯನು ಈಯಬೇಕು ಪುರಂದರ ವಿಟ್ಠಲರಾಯ!
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!