ಬರೆದದ್ದು : ಕನಕದಾಸರು ರಾಗ : ಅಠಾಣ ತಾಳ : ಅಟ
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ || ಪಲ್ಲವಿ ||
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ || ಅನುಪಲ್ಲವಿ ||
ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ || ೧ ||
ಕಡುಕೋಪದಿಂ ಖಳನು ಖಡುಗ ಕೈಯಲಿ ಪಿಡಿದು ನಿ
ನ್ನೊಡೆಯನೆಲ್ಲಿಹನೆಂದು ಕಂಬವನು ಜಡಿಯೆ
ದೃಢಭಕುತಿಯಿಂ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ || ೨ ||
ಯಮಸುತನ ರಾಣಿಗಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಾಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಾಲಾಕ್ಷ ಕಾಗಿನೆಲೆಯಾದಿ ಕೇಶವನೆ || ೩ ||
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!