(ರಾಗ ನಾಟ )
ಶ್ರೀಪತಿಯ ನಾಭಿಕಮಲದಿ ಅಜ ಜನಿಸಿದನು
ಅಜನ ಮಾನಸ ಪುತ್ರರೆ ಸನಕಾದಿಗಳು
ಸನಕಾದಿಗಳೆ ಶಿಷ್ಯರೇ ದುರ್ವಾಸರು
ದುರ್ವಾಸರ ಶಿಷ್ಯರೇ ಪರತೀರ್ಥರು
ಪರತೀರ್ಥರ ಶಿಷ್ಯರೇ ಸತ್ಯಪ್ರಜ್ಞರು
ಸತ್ಯಪ್ರಜ್ಞರ ಶಿಷ್ಯರೇ ಪ್ರಾಜ್ಞತೀರ್ಥರು
ಪ್ರಾಜ್ಞತೀರ್ಥರ ಶಿಷ್ಯರೇ ಅಚ್ಯುತಪ್ರೇಕ್ಷರು
ಅಚ್ಯುತಪ್ರೇಕ್ಷರ ಕರಸಂಜಾತರೇ ಮಹಾಭಾಷ್ಯಕಾರರು
ಮಹಾಭಾಷ್ಯಕಾರರೇ ಗುರುಮುಖ್ಯಪ್ರಾಣರು
ಗುರು ಮುಖ್ಯಪ್ರಾಣಪತಿ ನಮ್ಮ ಪುರಂದರವಿಠಲನ ದಾಸರಿಗೆ ನಮೋ ನಮಃ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!