ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ ||ಪಲ್ಲವಿ||
ವಾಗಭಿಮಾನಿ ವರ ಬ್ರಹ್ಮಾಣಿ
ಸುಂದರವೇಣಿ ಸುಚರಿತ್ರಾಣಿ ||ಅನುಪಲ್ಲವಿ||
ಜಗದೊಳು ನಿಮ್ಮ ಪೊಗಳುವೆನಮ್ಮ
ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ ||೧||
ಪಾಡುವೆ ಶ್ರುತಿಯ ಬೇಡುವೆ ಮತಿಯ
ಪುರಂದರವಿಠಲನ ಸೋದರಸೊಸೆಯ ||೨||
(ಪುರಂದರವಿಠಲನ ಮುದ್ದಿನ ಸೊಸೆಯ ಅನ್ನುವ ಪಾಠಾಂತರವೂ ಇರುವುದೆಂದು ತೋರುತ್ತೆ)
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!