ಪಲ್ಲವಿ:
ಇದೇ ಸಮಯ ರಂಗ ಬಾರೆಲೊ ಇದೇ ಸಮಯ ಕೃಷ್ಣ ಬಾರೆಲೊ
ಚರಣಗಳು:
1: ಅತ್ತಿಗೆ ಲಕ್ಷಬತ್ತಿ ಶೀಲಳೋ ಅಷ್ಟು ಆಗದೆ ಅವಳೇಳಳೊ
ಅತ್ತೆ ಪುರಾಣದಿ ಲೋಲಳೊ ಸರಿ ಹೊತ್ತಿನ ವೇಳೆಗೆ ಬರುವಳೋ
2: ಮಾವ ಎನ್ನಲಿ ಅವಿಶ್ವಾಸಿಯೋ ಮದುವೆಯಾದ ಗಂಡ ಉದಾಸಿಯೋ
ಭಾವನು ಎನ್ನ ಸೇರ ಹೇಸಿಯೋ ನೀನೀ ವೇಳೆಗೆ ಬಂದರೆ ವಾಸಿಯೋ
3: ತಂದೆ ತಾಯಿ ಆಸೆ ಮಾಡೆನೊ ಎನ್ನ ಕಂದನ ಮೇಲೆ ಮನಸಿಡೆನೊ
ಮಂದರಧರ ಪುರಂದರ ವಿಟ್ಠಲ ನೀ ಬಂದರೆ ಚರಣ ಸೇವೆ ಮಾಳ್ಪೆನೋ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!