( ರಾಗ ಶಂಕರಾಭರಣ. ತ್ರಿಪುಟ ತಾಳ)
ಎನಗೂ ಆಣೆ ರಂಗ ನಿನಗೂ ಆಣೆ ||ಪ||
ಎನಗೂ ನಿನಗೂ ಇಬ್ಬರಿಗೂ ಭಕ್ತರಾಣೆ ||ಅ||
ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ ರಂಗ
ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ ||
ತನು ಮನ ಧನದಲಿ ವಂಚಕನಾದರೆ ಎನಗೆ ಆಣೆ ರಂಗ
ಮನಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ ||
ಕಾಕು ಮನುಜರ ಸಂಗವ ಮಾಡಿದರೆನಗೆ ಆಣೆ ರಂಗ
ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ ||
ಶಿಷ್ಟವ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ ||
ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ
ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ ||
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!